1 Samuel 6:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು. (Verses 14-15)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
Kannada BSI Bible 2016
ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂಡಿಯು ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಲ್ಲಲು ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಒಡೆದು ಅಗ್ನಿಮಾಡಿ ಆ ಹಸುಗಳನ್ನು ಯೆಹೋವನಿಗೋಸ್ಕರ ಆಹುತಿಕೊಟ್ಟರು.
Kannada Bible (KNCL) BSI 2016
ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು.