1 Samuel 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 14
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.
Kannada BSI Bible 2016
ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಯೆಹೋವನ ಮಂಜೂಷವನ್ನೂ ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್‍ಷೆಮೆಷಿನವರು ಅದೇ ದಿವಸ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Kannada Bible (KNCL) BSI 2016
ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹಾಗು ಚಿನ್ನದ ವಸ್ತುಗಳಿದ್ದ ಚಿಕ್ಕಪೆಟ್ಟಿಗೆಯನ್ನು ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್‍ಷೆಮೆಷಿನವರು ಅದೇ ದಿನ ಸರ್ವೇಶ್ವರನಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು ಯೆಹೋವ ದೇವರ ಮಂಜೂಷವನ್ನೂ, ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳಿದ್ದ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ, ಆ ದೊಡ್ಡ ಬಂಡೆಯ ಮೇಲಿಟ್ಟುಕೊಂಡರು. ಬೇತ್ ಷೆಮೆಷ್ ಊರಿನವರು ಆ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸಮರ್ಪಣೆಗಳನ್ನೂ ಅರ್ಪಿಸಿದರು.