1 Samuel 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ
Kannada BSI Bible 2016
ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗೂ
Kannada Bible (KNCL) BSI 2016
ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು.