1 Samuel 6:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.
Kannada BSI Bible 2016
ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಪ್ರಭುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮನಗರಗಳ ಸಂಖ್ಯೆಗೂ ಸರಿಯಾಗಿದ್ದವು. ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇಂದಿನವರೆಗೂ ಇರುವ ಯೆಹೋವನ ಮಂಜೂಷವು ಇಡಲ್ಪಟ್ಟ ಆ ದೊಡ್ಡ ಕಲ್ಲೇ ಈ ಗ್ರಾಮನಗರಗಳಿಗೆ ಮೇರೆಯಾಗಿದೆ.
Kannada Bible (KNCL) BSI 2016
ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ರಾಜರ ಅಧೀನದಲ್ಲಿದ್ದ ಎಲ್ಲ ಪುಟ್ಟ ಗ್ರಾಮಗಳ ಹಾಗು ಕೋಟೆಪೇಟೆಗಳ ಸಂಖ್ಯೆಗೆ ಸರಿಯಾಗಿದ್ದವು. ಸರ್ವೇಶ್ವರನ ಮಂಜೂಷವನ್ನು ಇಡಲಾಗಿದ್ದ ಆ ದೊಡ್ಡ ಕಲ್ಲು ಇಂದಿನವರೆಗೂ ಬೇತ್ ಷೆಮೆಷಿನ ಯೆಹೋಶುವಿನ ಹೊಲದಲ್ಲಿ ಸಾಕ್ಷಿಯಾಗಿ ನಿಂತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ ಲೆಕ್ಕಕ್ಕೆ ಸರಿಯಾಗಿದ್ದವು. ಯೆಹೋವ ದೇವರ ಮಂಜೂಷವನ್ನಿಟ್ಟ ದೊಡ್ಡ ಬಂಡೆಯು ಇಂದಿನವರೆಗೂ ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಸಾಕ್ಷಿಯಾಗಿದೆ.