1 Samuel 6:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.
Kannada BSI Bible 2016
ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತ್‍ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಹಣಿಕಿನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಇದಲ್ಲದೆ ಐವತ್ತು ಸಾವಿರ ಜನರು ಮರಣಹೊಂದಿದರು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನುಂಟುಮಾಡಿದದರಿಂದ ಬೇತ್‍ಷೆಮೆಷಿನವರು ಗೋಳಾಡಿ -
Kannada Bible (KNCL) BSI 2016
ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.