1 Samuel 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು
Kannada BSI Bible 2016
ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿಹೇಳುವವರನ್ನೂ ಕರೆದು ಅವರಿಗೆ - ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ತಿರಿಗಿ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು? ತಿಳಿಸಿರಿ ಅನ್ನಲು ಅವರು -
Kannada Bible (KNCL) BSI 2016
ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.