1 Samuel 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
Kannada BSI Bible 2016
ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.
Kannada Bible (KNCL) BSI 2016
ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.