1 Samuel 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
Kannada BSI Bible 2016
ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು - ನಾವು ಪ್ರಾಯಶ್ಚಿತ್ತಾರ್ಥವಾಗಿ ಕಳುಹಿಸತಕ್ಕದ್ದೇನು ಎನ್ನಲು ಅವರು - ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ ಇಲಿಗಳನ್ನೂ ಮಾಡಿಸಬೇಕು.
Kannada Bible (KNCL) BSI 2016
ಆ ಜನರು, “ನಾವು ಪ್ರಾಯಶ್ಚಿತಾರ್ಥವಾಗಿ ಏನನ್ನು ಕಳುಹಿಸಬೇಕು?” ಎಂದು ವಿಚಾರಿಸಿದರು. ಅದಕ್ಕೆ ಅವರು, “ನಿಮಗೂ ನಿಮ್ಮ ರಾಜರುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ನಿಮ್ಮ ರಾಜರುಗಳ ಸಂಖ್ಯೆಗೆ ಸರಿಯಾಗಿ ಐದು ಬಂಗಾರದ ಗಡ್ಡೆಗಳನ್ನು ಹಾಗು ಐದು ಬಂಗಾರದ ಇಲಿಗಳನ್ನು ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.