1 Samuel 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.
Kannada BSI Bible 2016
ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ ಇಸ್ರಾಯೇಲ್‍ದೇವರಿಗೆ ಬಹುಮಾನವಾಗಿ ಕೊಟ್ಟರೆ ಆತನ ಶಿಕ್ಷಾಹಸ್ತವು ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಪ್ರಾಂತಗಳನ್ನೂ ಬಿಟ್ಟುಹೋದೀತು.
Kannada Bible (KNCL) BSI 2016
ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.