1 Samuel 6:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಈ ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಈ ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ
Kannada BSI Bible 2016
ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿ ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು
Kannada Bible (KNCL) BSI 2016
ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು,