1 Samuel 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಡಿರಿ. ಚಿನ್ನದ ಮಾದರಿಗಳನ್ನು ಚೀಲದಲ್ಲಿಟ್ಟು ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಈ ಚಿನ್ನದ ಮಾದರಿಗಳು ನೀವು ನಿಮ್ಮ ಪಾಪಕ್ಷಮೆಗಾಗಿ ದೇವರಿಗೆ ಕಳುಹಿಸುತ್ತಿರುವ ಕಾಣಿಕೆಗಳಾಗಿವೆ; ಬಂಡಿಯನ್ನು ಅದರ ದಾರಿಯಲ್ಲಿ ಕಳುಹಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.
Kannada BSI Bible 2016
ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೂಡಿ ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ.
Kannada Bible (KNCL) BSI 2016
ಆ ಬಂಡಿಯ ಮೇಲೆ ಸರ್ವೇಶ್ವರನ ಮಂಜೂಷವನ್ನು ಹಾಗು ನೀವು ಪ್ರಾಯಶ್ಚಿತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕಪೆಟ್ಟಿಗೆಯನ್ನು ಇಡಿ. ಬಳಿಕ ಆ ಬಂಡಿಯನ್ನು ಹೊರಡಿಸಿ ಹೋಗಬಿಡಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ.