1 Samuel 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದ್ವಾನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದ್ವಾನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.
Kannada BSI Bible 2016
ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕಿರ್ಯತ್ಯಾರೀವಿುನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.
Kannada Bible (KNCL) BSI 2016
ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.