1 Samuel 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು ಎಕ್ರೋನ್‌ನಿಂದ ಗತ್‌ವರೆಗಿನ ಪ್ರದೇಶದ ಇಸ್ರೇಲ್ ಪಟ್ಟಣಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಇಸ್ರೇಲರು ಆ ಪಟ್ಟಣಗಳನ್ನು ಮರಳಿ ಗೆದ್ದುಕೊಂಡರು ಮತ್ತು ಆ ಪಟ್ಟಣದ ಸುತ್ತಲಿನ ಪ್ರದೇಶಗಳನ್ನು ವಶಪಡಿಸಿಕೊಂಡರು. ಇಸ್ರೇಲರ ಮತ್ತು ಅಮೋರಿಯರ ಮಧ್ಯೆ ಶಾಂತಿ ನೆಲೆಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.
Kannada BSI Bible 2016
ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್‌ ಮೊದಲು ಗೊಂಡು ಗತ್‌ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಾಯೇಲ್ಯರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲ್ಯರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲ್ಯರಿಗೂ ಅಮೋರಿಯರಿಗೂ ಸಮಾಧಾನವಿತ್ತು.
Kannada Bible (KNCL) BSI 2016
ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಯೇಲರಿಂದ ಕಿತ್ತುಕೊಂಡಿದ್ದ ಎಲ್ಲ ಪಟ್ಟಣಗಳು ಇಸ್ರಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು.