1 Samuel 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.
Kannada BSI Bible 2016
ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇಸ್ರಾಯೇಲ್ಯರ ನ್ಯಾಯಗಳನ್ನು ತೀರಿಸುವದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ವಿುಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರಿಗಿ ಬರುತ್ತಿದ್ದನು.
Kannada Bible (KNCL) BSI 2016
ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.