1 Samuel 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.
Kannada BSI Bible 2016
ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.
Kannada Bible (KNCL) BSI 2016
ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.