1 Samuel 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮುವೇಲನು ಅವರಿಗೆ, “ ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
Kannada BSI Bible 2016
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.
Kannada Bible (KNCL) BSI 2016
ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.