1 Samuel 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.
Kannada BSI Bible 2016
ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು
Kannada Bible (KNCL) BSI 2016
ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.