1 Samuel 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
Kannada BSI Bible 2016
ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್‌ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
Kannada Bible (KNCL) BSI 2016
ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.