1 Samuel 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.
Kannada BSI Bible 2016
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -
Kannada Bible (KNCL) BSI 2016
ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.