1 Samuel 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
Kannada BSI Bible 2016
ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
Kannada Bible (KNCL) BSI 2016
ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು.