1 Samuel 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷೆಬದಲ್ಲಿ ನ್ಯಾಯಾಧೀಶರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.
Kannada BSI Bible 2016
ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಮರಚಲ ಮಗನ ಹೆಸರು ಅಬೀಯ.
Kannada Bible (KNCL) BSI 2016
ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಚೊಚ್ಚಲ ಮಗನ ಹೆಸರು ಯೋಯೇಲ್, ಅವನ ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.