1 Samuel 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ರಾಜನನ್ನು ನೇಮಿಸು” ಎಂದು ಹೇಳಿದನು. ಆಗ ಸಮುವೇಲನು ಇಸ್ರೇಲರಿಗೆ, “ಹಾಗೆಯೇ ಆಗಲಿ, ನೀವು ಒಬ್ಬ ಹೊಸ ರಾಜನನ್ನು ಪಡೆದುಕೊಳ್ಳುವಿರಿ. ಈಗ ನೀವೆಲ್ಲ ನಿಮ್ಮ ನಿಮ್ಮ ಮನೆಗಳಿಗೆ ಹಿಂದಿರುಗಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ, “ ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇವಿುಸು ಎಂದನು. ಆಗ ಸಮುವೇಲನು ಇಸ್ರಾಯೇಲ್ಯರಿಗೆ - ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸಮುಯೇಲನಿಗೆ, “ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು,” ಎಂದರು. ಆಗ ಸಮುಯೇಲನು ಇಸ್ರಾಯೇಲ್ ಜನರಿಗೆ, “ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ,” ಎಂದನು.