1 Samuel 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.
Kannada BSI Bible 2016
ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಆದದರಿಂದ ಬೇರೆ ಎಲ್ಲಾ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇವಿುಸು; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ ಅಂದರು.
Kannada Bible (KNCL) BSI 2016
“ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು.