1 Samuel 8:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.
Kannada BSI Bible 2016
ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.
Kannada Bible (KNCL) BSI 2016
ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು.