1 Samuel 9:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನ್ ಕುಲದ ಕೀಷನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಕೀಷನು ಅಬೀಯೇಲನ ಮಗ. ಅಬೀಯೇಲನು ಚೆರೋರನ ಮಗ. ಚೆರೋರನು ಬೆಕೋರತನ ಮಗ. ಬೆಕೋರತನು ಅಫೀಹನ ಮಗ. ಇವರೆಲ್ಲರು ಬೆನ್ಯಾಮೀನನ ಕುಲಕ್ಕೆ ಸೇರಿದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
Kannada BSI Bible 2016
ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್‍ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಅಫೀಹನ ಮರಿಮಗನೂ ಆದ ಅಬೀಯೇಲನ ಮಗನು.
Kannada Bible (KNCL) BSI 2016
ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಬೆನ್ಯಾಮೀನ್ಯನಾದ ಅಫೀಹನ ಮಗನು. ಇವನು ಐಶ್ವರ್ಯವಂತನಾಗಿದ್ದನು.