1 Samuel 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.
Kannada BSI Bible 2016
ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.
Kannada Bible (KNCL) BSI 2016
“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.