1 Samuel 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
Kannada BSI Bible 2016
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.
Kannada Bible (KNCL) BSI 2016
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.