1 Samuel 9:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಹೊರಬಾಗಿಲಿನ ಬಳಿಯಿಂದ ಸಮುವೇಲನ ಬಳಿಗೆ ಬಂದನು. ಸೌಲನು ಸಮುವೇಲನನ್ನು, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ನನಗೆ ಹೇಳಿ” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ.
Kannada BSI Bible 2016
ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರುಬಾಗಲಿಗೆ ಬಂದು ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ - ದರ್ಶಿಯ ಮನೆ ಎಲ್ಲಿದೆ ಎಂಬದನ್ನು ದಯವಿಟ್ಟು ತಿಳಿಸುವಿಯೋ ಎನ್ನಲು ಸಮುವೇಲನು -
Kannada Bible (KNCL) BSI 2016
ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, “ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ?’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಊರಿನ ಬಾಗಿಲಲ್ಲಿ ಇರುವ ಸಮುಯೇಲನ ಸಮೀಪಕ್ಕೆ ಬಂದು, ಅವನಿಗೆ, “ದರ್ಶಿಯ ಮನೆಯು ಎಲ್ಲಿ ಇದೆ? ದಯಮಾಡಿ ನೀನು ನನಗೆ ತಿಳಿಸು,” ಎಂದನು.