1 Samuel 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
Kannada BSI Bible 2016
ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು.
Kannada Bible (KNCL) BSI 2016
ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.