1 Samuel 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನೂ ಅವನ ಸೇವಕನೂ ಸಮುವೇಲನೂ ಪಟ್ಟಣದ ಅಂಚಿನಲ್ಲಿ ಒಟ್ಟಾಗಿ ನಡೆಯುತ್ತಿದ್ದಾಗ, ಸಮುವೇಲನು ಸೌಲನಿಗೆ, “ನಿನ್ನ ಸೇವಕನಿಗೆ ನಮ್ಮಿಂದ ಮುಂದೆ ಹೋಗಲು ತಿಳಿಸು. ನಾನು ದೇವರ ಸಂದೇಶವನ್ನು ನಿನಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಆದಕಾರಣ ಸೇವಕನು ಅವರಿಂದ ಮುಂದೆ ನಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.
Kannada BSI Bible 2016
ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಸೌಲನಿಗೆ - ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿಯೊಂದುಂಟು ಎಂದನು.
Kannada Bible (KNCL) BSI 2016
“ನಿನ್ನ ಸೇವಕನನ್ನು ಮುಂದೆ ಕಳುಹಿಸಿ, ನೀನು ಇಲ್ಲೇ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು.