1 Samuel 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.
Kannada BSI Bible 2016
ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು.
Kannada Bible (KNCL) BSI 2016
ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.