1 Samuel 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು ಸೌಲನಿಗೆ, “ಇಲ್ಲಿ ನೋಡು, ನನ್ನ ಬಳಿ ಸ್ವಲ್ಪ ಹಣವಿದೆ. ಇದನ್ನು ಆ ದೇವರ ಮನುಷ್ಯನಿಗೆ ಕೊಡೋಣ. ನಾವು ಎಲ್ಲಿಗೆ ಹೋಗಬೇಕೆಂಬುದನ್ನು ಅವನು ತಿಳಿಸುತ್ತಾನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
Kannada BSI Bible 2016
ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಏನು ಕೊಡುವುದು?” ಎನ್ನಲು ಆ ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯವಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ಸೇವಕನು ಸೌಲನಿಗೆ ಉತ್ತರವಾಗಿ, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯ ಇದೆ, ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು,” ಎಂದನು.