1 Thessalonians 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಕುಮಾರನು ಪರಲೋಕದಿ0ದ ಬರುವುದನ್ನು ಎದುರು ನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿ0ದ ಜೀವ0ತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮು0ದೆ ಬರುವ ದೇವರ ಕೋಪದ ತೀರ್ಪಿನಿ0ದ ನಮ್ಮನ್ನು ರಕ್ಷಿಸುವವನು ಆತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
Kannada BSI Bible 2016
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
Kannada Bible (KNCL) BSI 2016
ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.