1 Thessalonians 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊ0ಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
Kannada BSI Bible 2016
ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
Kannada Bible (KNCL) BSI 2016
ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.