1 Thessalonians 1:3 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ತ0ದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನ0ಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿ0ದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
Kannada BSI Bible 2016
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
Kannada Bible (KNCL) BSI 2016
ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.