1 Thessalonians 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತ0ದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆ0ಬ ನಿಶ್ಚಿತ ಜ್ಞಾನದೊಡನೆಯೂ ತ0ದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎ0ಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
Kannada BSI Bible 2016
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.
Kannada Bible (KNCL) BSI 2016
ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.