1 Thessalonians 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿ0ಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸ0ತಸದಿ0ದ ಒಪ್ಪಿಕೊ0ಡಿರಿ. ಪವಿತ್ರಾತ್ಮನೇ ನಿಮಗೆ ಆ ಸ0ತಸವನ್ನು ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
Kannada BSI Bible 2016
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.
Kannada Bible (KNCL) BSI 2016
ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.