1 Thessalonians 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿ0ದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನ0ಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬ0ದಿತು. ಆದುದರಿ0ದ ನಿಮ್ಮ ನ0ಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.
Kannada BSI Bible 2016
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
Kannada Bible (KNCL) BSI 2016
ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.