1 Thessalonians 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಿಮ್ಮಿ0ದ ಸ್ವಲ್ಪಕಾಲ ಅಗಲಿ ಹೋಗಿದ್ದೆವು. (ನಾವು ನಿಮ್ಮೊಡನೆ ಇರಲಿಲ್ಲ. ಆದರೆ ನಮ್ಮ ಆಲೋಚನೆಗಳು ನಿಮ್ಮೊಡನೆ ಇನ್ನೂ ಇವೆ.) ನಿಮ್ಮನ್ನು ನೋಡಲು ಅತ್ಯಾಸೆಯಿ0ದ ಬಹಳ ಪ್ರಯತ್ನಪಟ್ಟೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
Kannada BSI Bible 2016
ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು.
Kannada Bible (KNCL) BSI 2016
ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.