1 Thessalonians 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸ0ತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.
Kannada Bible (KNCL) BSI 2016
ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?