1 Thessalonians 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆ0ದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿ0ದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
Kannada BSI Bible 2016
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.
Kannada Bible (KNCL) BSI 2016
ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.