1 Thessalonians 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರಿ0ದ ಬರುವ ಮಾನಮರ್ಯಾದೆಗಳನ್ನು ನಿಮ್ಮಿ0ದಾಗಲಿ ಇತರ ಜನರಿ0ದಾಗಲಿ ನಾವೆ0ದೂ ಬಯಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
Kannada BSI Bible 2016
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.
Kannada Bible (KNCL) BSI 2016
ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ.