1 Thessalonians 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮನ್ನು ಬಹಳವಾಗಿ ಪ್ರೀತಿಸಿದೆವು. ಆದುದರಿ0ದ ದೇವರ ಸುವಾರ್ತೆಯನ್ನು ನಿಮ್ಮೊಡನೆ ಹ0ಚಿಕೊಳ್ಳಲು, ಮಾತ್ರವೇ ಅಲ್ಲ, ನಿಮಗೋಸ್ಕರ ಸ್ವ0ತ ಪ್ರಾಣವನ್ನೇ ಕೊಡಲು ಸಿದ್ಧರಾಗಿದ್ದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
Kannada BSI Bible 2016
ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಮಗೆ ಅತಿ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ಪ್ರಾಣವನ್ನೇ ಕೊಡುವದಕ್ಕೆ ಸಂತೋಷಿಸುವವರಾದೆವು.
Kannada Bible (KNCL) BSI 2016
ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.