1 Thessalonians 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕ0ಡು ನಿಮ್ಮ ನ0ಬಿಕೆಯಲ್ಲಿರುವ ಕು0ದುಕೊರತೆಗಳನ್ನು ನಿವಾರಿಸಬೇಕೆ0ದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
Kannada BSI Bible 2016
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವದಕ್ಕೂ ನಮಗೆ ಅನುಕೂಲವಾಗಬೇಕೆಂದು ನಾವು ಹಗಲಿರುಳು ದೇವರನ್ನು ಅತ್ಯಂತವಾಗಿ ಬೇಡುವವರಾಗಿದ್ದೇವೆ.
Kannada Bible (KNCL) BSI 2016
ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.