1 Thessalonians 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಿಮ್ಮನ್ನು ಪ್ರೀತಿಸುವ0ತೆ ನಿಮ್ಮ ಪ್ರೀತಿಯು ವೃದ್ಧಿಯಾಗಿ ಒಬ್ಬೊಬ್ಬರ ಮೇಲೆಯೂ ಇತರ ಜನರೆಲ್ಲರ ಮೇಲೆಯೂ ಹೆಚ್ಚಾಗಲೆ0ದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
Kannada BSI Bible 2016
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ನಮ್ಮ ಪ್ರೀತಿಯು ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರೊಬ್ಬರ ಮೇಲೆಯೂ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿಹೊಂದಿ ಅತ್ಯಧಿಕವಾಗುವಂತೆ ಕರ್ತನು ಅನುಗ್ರಹಿಸಲಿ.
Kannada Bible (KNCL) BSI 2016
ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.