1 Thessalonians 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಹೃದಯಗಳು ಬಲಗೊಳ್ಳಲೆ0ದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊ0ದಿಗೆ ಪ್ರತ್ಯಕ್ಷನಾದಾಗ ನೀವು ತ0ದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Kannada Bible (KNCL) BSI 2016
ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!