1 Thessalonians 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ನ0ಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆ0ಬ ಕಾರಣದಿ0ದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿ0ದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿ0ದ ಸೋಲಿಸಿರಬಹುದೆ0ಬ ಭಯ ನನಗಿತ್ತು. ಒ0ದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.
Kannada BSI Bible 2016
ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು.
Kannada Bible (KNCL) BSI 2016
ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.