1 Thessalonians 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ತಿಮೊಥೆಯನು ನಿಮ್ಮಿ0ದ ನಮ್ಮ ಬಳಿಗೆ ಹಿ0ತಿರುಗಿ ಬ0ದಾಗ, ನಿಮ್ಮ ನ0ಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆ0ತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿ0ದ ಇದ್ದೀರೆ0ತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿ0ದ ಇದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.
Kannada BSI Bible 2016
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ.
Kannada Bible (KNCL) BSI 2016
ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.