1 Thessalonians 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ನಿಮಿತ್ತದಿ0ದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿ0ದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನ0ದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
Kannada BSI Bible 2016
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಿವಿುತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಕ್ಕಾಗಿ ದೇವರಿಗೆ ತಕ್ಕಷ್ಟು ಸ್ತೋತ್ರಮಾಡುವದು ನಮ್ಮಿಂದ ಹೇಗಾದೀತು?
Kannada Bible (KNCL) BSI 2016
ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಆನಂದಕ್ಕೆ ಬದಲಾಗಿ ದೇವರಿಗೆ ಹೇಗೆ ಸಾಕಷ್ಟು ಕೃತಜ್ಞತೆಯನ್ನು ಸಲ್ಲಿಸಬಹುದು?