1 Thessalonians 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆ0ದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆ0ದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
Kannada BSI Bible 2016
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
Kannada Bible (KNCL) BSI 2016
ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.